ಚಾಮರಾಜನಗರ : ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ…

76
firstsuddi

ಚಾಮರಾಜನಗರ : ಬಿಸಿಯೂಟ ಸೇವಿಸಿ 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ವಡಕೆಹಳ್ಳದಲ್ಲಿ ನಡೆದಿದೆ.

ಅಸ್ವಸ್ಥಗೊಂಡ ಮಕ್ಕಳು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಅಸ್ವಸ್ಥ ಮಕ್ಕಳಿಗೆ ಹನೂರು ತಾಲೂಕಿನ ಕೌದಳ್ಳಿ, ರಾಮಾಪುರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂದು ಬಿಇಒ ಸ್ವಾಮಿ ಮಾಹಿತಿ ನೀಡಿದ್ದಾರೆ. ತಹಸೀಲ್ದಾರ್ ನಾಗರಾಜು, ವೈದ್ಯ ಡಾ.ರಾಜೇಶ್ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.