ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ಸುಳ್ವಾಡಿ ಮಾರಮ್ಮನ ದೇಗುಲದಲ್ಲಿ ನಡೆದ ವಿಷ ಪ್ರಸಾದ ದುರಂತ ಪ್ರಕರಣದ ಎರಡನೇ ಆರೋಪಿ ಅಂಬಿಕಾ ಜಾಮೀನು ಅರ್ಜಿ ಸಲ್ಲಿಸಿದ್ದಾಳೆ.
ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿ ಈ ಹಿಂದೆ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೂ ಜಾಮೀನು ಸಿಕ್ಕಿರಲಿಲ್ಲ. ಇದೀಗ ಎರಡನೇ ಆರೋಪಿ ಅಂಬಿಕಾ ನಿನ್ನೆ ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿ, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾಳೆ. ಸರ್ಕಾರದ ಪರ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಸಮಯಾವಕಾಶ ಕೋರಿದ ಹಿನ್ನೆಲೆ ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ಅಕ್ಟೋಬರ್.29ಕ್ಕೆ ಮುಂದೂಡಿದ್ದಾರೆ.
2018 ರ ಡಿಸೆಂಬರ್.14 ರಂದು ನಡೆದಿದ್ದ ಈ ದುರಂತದಲ್ಲಿ 17 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಅಸ್ವಸ್ಥಗೊಂಡಿದ್ದರು.










