ಚಾಮರಾಜನಗರಕ್ಕೆ ಆಕ್ಸಿಜನ್ ಕಳುಹಿಸಲಾಗಿದೆ – ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ…

160
firstsuddi

ಮೈಸೂರು : ಚಾಮರಾಜನಗರಕ್ಕೆ ನಿನ್ನೆ ರಾತ್ರಿ 12.30ರವರೆಗೂ ಜಿಲ್ಲೆಯಿಂದ ಒಟ್ಟು 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಸರಿಯಾದ ಸಮಯದಲ್ಲಿ ಬಂದಿದ್ದೇಯಾ ಇಲ್ಲವೋ ಗೊತ್ತಿಲ್ಲ. ಆಕ್ಸಿಜನ್ ಲಿಕ್ವಿಡ್ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು ಎಂದು ತಿಳಿಸಿದೆ.

ಈ ವಿಚಾರದಲ್ಲಿ ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ನಾವು ಅಧಿಕೃತವಾಗಿ ನಿನ್ನೆ ಮಧ್ಯರಾತ್ರಿಯ ವೇಳೆಗೆ 250 ಆಕ್ಸಿಜನ್ ಸಿಲಿಂಡರ್ ಕಳಿಸಿರೋದು ದಾಖಲೆಯಲ್ಲಿದೆ. ಜಿಲ್ಲೆಯಲ್ಲಿನ ಸೌತ್ರನ್ ಗ್ಯಾಸ್ನಿಂದ 210 ಹಾಗೂ ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಗ್ಯಾಸ್ ಸಿಲಿಂಡರ್ ಚಾಮರಾಜನಗರಕ್ಕೆ ನಿನ್ನೆ ಮಧ್ಯರಾತ್ರಿಯೆ ರವಾನೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ಸ್ಪಷನೆ ನೀಡಿದೆ.