ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ. ಸತ್ಯನಾರಾಯಣ(74) ವಿಧಿವಶರಾಗಿದ್ದು, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರ ಅಂತಿಮ ದರ್ಶನವನ್ನು ಅವರ ಹುಟ್ಟೂರಾದ ಮೈಸೂರಿನ ಗುಂಜ್ರಾಲ್ ಛತ್ರದ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಸತ್ಯನಾರಾಯಣ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರಾಗಿದ್ದರು. ಸಚಿವರಾದ ಜಿ.ಟಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಅಂತಿಮ ದರ್ಶನವನ್ನು ಪಡೆದಿದ್ದು, ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.










