ಮೂಡಿಗೆರೆ : ಚಾರ್ಮಾಡಿ ಘಾಟ್‍ನಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ…

299
firstsuddi

ಮೂಡಿಗೆರೆ : ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ನಡೆಯುತ್ತಿರುವ ತಡೆಗೋಡೆ ಕಾಮಗಾರಿಯನ್ನು ಕಾರ್ಯಪಾಲಕ ಅಭಿಯಂತರರಾದ ಅರ್ಚನಾ ಅವರು ಪರಿಶೀಲನೆ ನಡೆಸಿದರು.
ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರಾದ ಅರ್ಚನಾ ಅವರು ಮಾತನಾಡಿ, ಮಳೆಗಾಲ ಮುಗಿಯುವುದರೊಳಗೆ ತಡೆಗೋಡೆ ಕಾಮಗಾರಿ ಪೂರ್ಣಗೊಳ್ಳಲಿದೆ. ಘಾಟ್‍ನ ಮೂರು ಕಡೆಗಳಲ್ಲಿ ರಸ್ತೆ ಕುಸಿತವಾದ ಸ್ಥಳದಲ್ಲಿ ಜರ್ಮನ್ ಕಾಂಕ್ರೆಟ್ ಮಾದರಿ ಕಾಮಗಾರಿ ನಡೆಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಸದ್ಯದಲ್ಲೆ ಕಾಮಗಾರಿ ಪ್ರಾರಂಭವಾಗಲಿದೆ ಎಂದರು. ಈ ಸಂದರ್ಭದಲ್ಲಿ ಸಹಾಯಕ ಅಭಿಯಂತರರು ಮುನಿರಾಜು ಮುಂತಾದವರು ಇದ್ದರು.