ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್-ಐವರು ಸಾವು…

174
firstsuddi

ಮಹಾರಾಷ್ಟ್ರ : ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಆಳದ ಕಂದಕಕ್ಕೆ ಬಸ್ ಉರುಳಿ ಬಿದ್ದು ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಕೊಂಡೈಬರಿ ಘಾಟ್‍ನಲ್ಲಿ ನಡೆದಿದೆ. ಮಲ್ಕಾಪುರದಿಂದ ಗುಜರಾತ್‍ನ ಸೂರತ್ ಕಡೆಗೆ ತೆರಳುತ್ತಿದ್ದ ಬಸ್ ಇಂದು ಬೆಳಗ್ಗಿನ ಜಾವ 3:15ರ ಸುಮಾರಿಗೆ ಕೊಂಡೈಬರಿ ಘಾಟ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸುಮಾರು 30 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದಿದ್ದು, ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.