ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿ- 15 ಮಂದಿಗೆ ಗಾಯ…

54
firstsuddi

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಪಲ್ಟಿಯಾಗಿ 15 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಗುಡ್ಡೆತೋಟದ ಬಳಿ ನಡೆದಿದೆ.

ಮೈಸೂರು ಮೂಲದ ಬಸ್ಸಿನಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿ ಬಂದಿದ್ದ ಮಾಲಾಧಾರಿಗಳು, ಶೃಂಗೇರಿ ಶಾರದಾಂಬೆ ದರ್ಶನ ಪಡೆದು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಹೊರಟಿದ್ದರು. ಬಸ್ ಜಯಪುರದಿಂದ ಗುಡ್ಡೆತೋಟದ ಮೂಲಕ ಹೊರನಾಡಿಗೆ ಹೋಗುವಾಗ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ. ಬಸ್ಸಿನಲ್ಲಿ 34 ಜನ ಮಾಲಾಧಾರಿಗಳು ಪ್ರಯಾಣ ಮಾಡುತ್ತಿದ್ದರು. ಅವರಲ್ಲಿ 15 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.