ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ, ಒಂದೇ ಕುಟುಂಬದ 6ಮಂದಿ ಸಾವು…

231
firstsuddi

ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 6ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಮೃತರು ಕರ್ನಾಟಕದ ಧಾರವಾಡ ಮೂಲದವರು ಎಂದು ತಿಳಿದು ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಕಾರು ಚಾಲಕ ಹಾಗೂ ಹೆಣ್ಣು ಮಗುವಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬೋರೆಗಾಂವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.