ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಐವರು ಸ್ಥಳದಲ್ಲೇ ಸಾವು…

168
firstsuddi

ಹೈದರಾಬಾದ್ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಲಗೊಂಡ ಜಿಲ್ಲೆಯ ಹೈದರಾಬಾದ್-ನಾಗಾರ್ಜುನ ಸಾಗರ ಹೆದ್ದಾರಿಯಲ್ಲಿ ನಡೆದಿದೆ. ಮೃತರು ತಡರಾತ್ರಿ ಕಾರಿನಲ್ಲಿ ಹೈದರಾಬಾದ್‍ನಿಂದ ಮಲ್ಲೆಪಲ್ಲಿಗೆ ತೆರಳುತ್ತಿದ್ದ ವೇಳೆ ಚಾಲಕ ನಿದ್ರೆ ಮಂಪರಿನಲ್ಲಿ ವೇಗವಾಗಿ ಕಾರನ್ನು ಚಲಾಯಿಸುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಪೈಪ್‍ಲೈನ್ ಘಟಕಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದ್ದು, ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.