ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಯುವಕರ ದುರ್ಮರಣ…

86
firstsuddi

ಹುಬ್ಬಳ್ಳಿ : ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಗಬ್ಬೂರ ಬೈಪಾಸ್ ಬಳಿ ಸಂಭವಿಸಿದೆ.

ಚಿಕ್ಕಬಳ್ಳಾಪುರ ಮೂಲದ ರಂಜಿತ್ ಮತ್ತು ರಾಕೇಶ್ ಮೃತರು. ಚಿಕ್ಕಬಳ್ಳಾಪುರದಿಂದ ದಾಂಡೇಲಿಗೆ ಪ್ರವಾಸ ಹೊರಟ್ಟಿದ್ದರು ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರ್ ಪಲ್ಟಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.