ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ, ಓರ್ವ ಸಾವು…

245
firstsuddi

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಿಕ್ಕಮಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿಯ ಕೆಂಗೇನಹಳ್ಳಿ ಬಳಿ ನಡೆದಿದೆ. ಕಿಶೋರ್ (22) ಮೃತ ದುರ್ಧೈವಿ. ಮೃತರು ಚಿಕ್ಕಮಗಳೂರಿನ ಕೋಟೆ ಬಡಾವಣೆಯ ನಿವಾಸಿ ಎಂದು ತಿಳಿದು ಬಂದಿದ್ದು, ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.