ಚಾಲಕನ ನಿಯಂತ್ರಣ ತಪ್ಪಿ ಟಂಟಂ ವಾಹನ ಪಲ್ಟಿ- ಇಬ್ಬರು ವೃದ್ಧೆಯರು ಸಾವು…

215
firstsuddi

ವಿಜಯಪುರ : ಚಾಲಕನ ನಿಯಂತ್ರಣ ತಪ್ಪಿ ಟಂಟಂ ವಾಹನ ಪಲ್ಟಿಯಾಗಿ ಇಬ್ಬರು ವೃದ್ದೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಹೂವಿನ ಹಿಪ್ಪರಗಿ ಬಳಿ ನಡೆದಿದೆ. ಮೃತರನ್ನು ಗುರಬಾಯಿ ಗಣಿ(65), ಹಾಗೂ ತಿಪ್ಟವ್ವ ಕಮತಗಿ (60) ಎಂದು ಗುರುತಿಸಲಾಗಿದೆ. ಮೃತರು ಕೊಣ್ಣೂರಿನಿಂದ ಜಾಲವಾದ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿಯಾಗಿದ್ದು, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಅವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ