ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಲಾರಿಗೆ ಡಿಕ್ಕಿ ಹೊಡೆದ ಕಾರು-ಇಬ್ಬರು ಸ್ಥಳದಲ್ಲೇ ಸಾವು…

141
firstsuddi

ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬಾವಿಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ. ಬೆಂಗಳುರಿನ ಮಂಜುನಾಥ ನಗರ ನಿವಾಸಿ ಚೇತನ್(22) ಹಾಗೂ ಆದಿ(19) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಚಂದು(19) ಹಾಗೂ ನವೀನ್(19) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.