ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ…

127
firstsuddi

ಹಾಸನ : ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್ ಡೀಸೆಲ್ ಸೋರಿಕೆಯಾಗಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಡೀಸೆಲ್ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಹದಗೆಟ್ಟಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮ ಟ್ಯಾಂಕರ್ ನ ಕ್ಯಾಪ್ ತೆರೆದು 16 ಸಾವಿರ ಲೀಟರ್ ಡೀಸೆಲ್ ಮಣ್ಣು ಪಾಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಯಾರೂ ಕೂಡಾ ವಾಹನದತ್ತ ಸುಳಿಯದಂತೆ ಜಾಗೃತೆ ವಹಿಸಿದ್ದಾರೆ.