ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…

158
firstsuddi

ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮೂಡೂರು ಕ್ರಾಸ್ ಬಳಿ ನಡೆದಿದೆ. ಮಲ್ಲಿಕಾರ್ಜುನ (31), ಮಲ್ಲಿಕಾರ್ಜುನ ಪಾಟೀಲ(25) ಮೃತ ದುರ್ಧೈವಿಗಳು ಎಂದು ಗುರುತಿಸಲಾಗಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವಾಸಿಗಳು ಎಂದು ತಿಳಿದು ಬಂದಿದೆ. ಮೃತರು ತಮ್ಮ ಕಾರಿನಲ್ಲಿ ತೆರಳಿತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಹಾನಗಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.