ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು-ಸ್ಥಳದಲ್ಲೇ ನಾಲ್ವರ ಸಾವು…

154
firstsuddi

ಯಾದಗಿರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆಂಭಾವಿ ಸಮೀಪದ ಗೌಡಗೇರಾ ರಸ್ತೆಯಲ್ಲಿ ನಡೆದಿದೆ. ನಗನೂರು ಗ್ರಾಮದ ನಿವಾಸಿಗಳಾದ ಶರಣು ಷಣ್ಮುಖಪ್ಪ(22), ತಿರುಪತಿ(25), ವಿಶ್ವನಾಥರೆಡ್ಡಿ(25) ಹಾಗೂ ಶರಣಪ್ಪ ಓಂಕಾರಪ್ಪ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.