ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಬಳಿ ಶನಿವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್(30), ಪವನ್ಶೆಟ್ಟಿ(32) ಹಾಗೂ ಚಿರಂಜೀವಿ(32) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಾಗರ್ ಎಂಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ತಕ್ಷಣ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಆ ವೇಳೆಗೆ ಮೂವರು ಸಾವನ್ನಪ್ಪಿದ್ದರು.
ಈ ಕುರಿತು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










