ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಬಸ್ ; 25 ಪ್ರಯಾಣಿಕರಿಗೆ ಗಾಯ…

53
firstsuddi

ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ಇಳಿದಿದ್ದು, ಪರಿಣಾಮ 25 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಾಳುಬೆಟ್ಟದ ಬಳಿ ನಡೆದಿದೆ.

ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದಿದೆ. ಪರಿಣಾಮ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿಗೆ ರವಾನಿಸಲಾಗಿದೆ. ಗಾಯಗೊಂಡ ಇನ್ನುಳಿದ 21 ಮಂದಿಯನ್ನು ಕೊಳ್ಳೇಗಾಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಡ್ಯ ಜಿಲ್ಲೆ ಮದ್ದೂರು ಡಿಪೋ ಬಸ್ ಇದಾಗಿದ್ದು, 51 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.