ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಉತ್ಸವ; ಅಂಗಡಿ-ಮುಂಗಟ್ಟುಗಳು ಬಂದ್, ಸಂಚಾರ ನಿಷೇಧ…

52
firstsuddi

ಚಿಕ್ಕಮಗಳೂರು: ದತ್ತಜಯಂತಿ ಕೊನೆಯ ದಿನವಾದ ಇಂದು ದತ್ತಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆಯುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ.

ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ದತ್ತಜಯಂತಿ ನಡೆಯುತ್ತಿದೆ. ದತ್ತಜಯಂತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿರುವ ಎಲ್ಲಾ ಅಂಗಡಿಗಳು ಸೇರಿದಂತೆ ನಗರದ ಎಲ್ಲ ಹೋಟೆಲ್, ಅಂಗಡಿ-ಮುಗ್ಗಟ್ಟುಗಳನ್ನು ತೆರೆಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾಧಾರಿಗಳು ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾವಿರಾರು ದತ್ತಮಾಲಾಧಾರಿಗಳು ಆಗಮಿಸಲಿದ್ದಾರೆ. ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ ಹೋಮ-ಹವನ-ಪೂಜೆ ನಡೆಯುತ್ತಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದಲ್ಲಿ ದತ್ತಜಯಂತಿ ನಡೆಯುತ್ತಿದೆ.

ನಿನ್ನೆ ದತ್ತ ಜಯಂತಿಯ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಸಲಾಯ್ತು. ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಸಾಗಿದ ಶೋಭಾಯಾತ್ರೆ ಆಜಾದ್ ವೃತ್ತದಲ್ಲಿ ಕೊನೆಗೊಂಡಿತು.