ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದ ಕಿಡಿಗೇಡಿಗಳು…

87
firstsuddi

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪಟ್ಟಣದ ಮೆಸ್ಕಾಂ ಕಚೇರಿ ಒಳಗೆ ಇದ್ದ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿಯಿಂದ ಹೊಡೆದಿದ್ದಾರೆ.

ಸರ್ಕಾರಿ ಕಚೇರಿಯಲ್ಲಿ ರಾಷ್ಟ್ರೀಯ ನಾಯಕರ ಭಾವಚಿತ್ರವನ್ನು ಹಾಕಲಾಗಿದೆ. ಅದರಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ. ಅಂಬೇಡ್ಕರ್ ಭಾವಚಿತ್ರದಲ್ಲಿ ಚಪ್ಪಲಿ ಗುರುತು ಕಾಣಿಸಿಕೊಂಡಿದೆ. ಹಾಗಾಗಿ ಫೋಟೋಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ದಲಿತ ಸಂಘಟನೆಯವರು ಅಂಬೇಡ್ಕರ್ ಫೋಟೋವನ್ನು ಸ್ವಚ್ಛಗೊಳಿಸಿ ಹೂವಿನ ಹಾರ ಹಾಕಿದ್ದಾರೆ. ನಂತರ ದುಷ್ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ದಲಿತ ಸಂಘಟನೆಗಳು ಶೃಂಗೇರಿ ಠಾಣೆಯಲ್ಲಿ ದೂರು ದಾಖಲಿಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಕಚೇರಿ ಒಳಗೆ ಇರುವ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದು ಯಾರು ಎಂಬ ಯಕ್ಷ ಪ್ರಶ್ನೆ ಮೂಡಿದೆ. ಈ ಬಗ್ಗೆ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.