ಚಿಕ್ಕಮಗಳೂರು : ಆಟೋಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ, ಗದ್ದೆಗೆ ಬಿದ್ದ ಆಟೋ, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ…

403
firstsuddi

ಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ತಾಲ್ಲೂಕಿನ ವಸ್ತಾರೆ ಬಳಿ ನಡೆದಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಆಟೋ ಗದ್ದೆಗೆ ಬಿದ್ದಿದ್ದು, ಹತ್ತಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು-ಮೂಡಿಗೆರೆ ರಸ್ತೆ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್‍ನಿಂದ ವಾಹನ ಸವಾರರು ಪರದಾಡುವಂತಾಗಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.