ಚಿಕ್ಕಮಗಳೂರು : ಇಂದು ಸ್ವಾತಿ ಅತ್ಯಾಚಾರ-ಕೊಲೆ ಪ್ರಕರಣದ ತೀರ್ಪು…

584
firstsuddi

ಚಿಕ್ಕಮಗಳೂರು : ಬಿಕಾಂ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದ್ದು, ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆ ಗ್ರಾಮದಲ್ಲಿ 2016ರ ಫೆಬ್ರವರಿಯಲ್ಲಿ ಪರೀಕ್ಷೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಿಕಾಂ ವಿದ್ಯಾರ್ಥಿನಿಯನ್ನು ಆರೋಪಿಗಳಾದ ಪ್ರದೀಪ್ ಹಾಗೂ ಸಂತೋಷ್ ಅಪಹರಿಸಿ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿ ಪಾಳು ಬಾವಿಗೆ ಹಾಕಿದ್ದರು. ಈ ಕುರಿತು ಆರೋಪಿ ಪ್ರದೀಪ್ ಹಾಗೂ ಸಂತೋಷ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆಸಿದ ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತೀರ್ಪನ್ನು ಪ್ರಕಟಿಸಲಿದ್ದು, ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಸಂತ್ರಸ್ಥೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.