ಚಿಕ್ಕಮಗಳೂರು : ಎಪಿಎಂಸಿ ಅಭಿವೃದ್ದಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಅರೇನಳ್ಳಿ ಪ್ರಕಾಶ್…

322
firstsuddi

ಚಿಕ್ಕಮಗಳೂರು : ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವಾರ್ಷಿಕ ಕ್ರಿಯಾ ಯೋಜನೆಯಡಿ 170 ಲಕ್ಷ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ಅರೇನಳ್ಳಿ ಪ್ರಕಾಶ್ ಹೇಳಿದರು.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸದ್ಯದಲ್ಲೇ ಟೆಂಡರ್ ಕರೆಯಲಾಗುವುದು ಎಂದರು.
ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸಿಮೆಂಟ್ ರಸ್ತೆ, ಮುಚ್ಚು ಹರಾಜು ಕಟ್ಟೆಗಳು, ಮೂಲಭೂತ ಸೌಲಭ್ಯ ಸೇರಿದಂತೆ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.
ಎಪಿಎಂಸಿ ಅಭಿವೃದ್ದಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು ಮಾರುಕಟ್ಟೆ ಅಭಿವೃದ್ದಿಗೆ ತಮ್ಮೊಂದಿಗೆ ಸಹಕರಿಸುವಂತೆ ಸದಸ್ಯರಿಗೆ ಮನವಿ ಮಾಡಿದರು.
ಸದಸ್ಯರಾದ ಟಿ.ಎಸ್.ಶಿವೇಗೌಡ, ಹೆಚ್.ಪಿ.ರಾಜೀವ್, ಎಂ.ಎಸ್.ವಿಕ್ರಾಂತ್, ಎಂ.ಕೆ.ಧರ್ಮಯ್ಯ, ಎನ್.ಟಿ.ಜಯಮ್ಮ, ಹೆಚ್.ಎಸ್.ಕವೀಶ್, ನೇತ್ರಾವತಿ, ಟಿ.ಈ.ಮಂಜುನಾಥ್, ಹೆಚ್.ಈ.ಪ್ರಕಾಶ್ ಪಾಲ್ಗೊಂಡಿದ್ದರು.