ಚಿಕ್ಕಮಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿಯ ನಡುವೆಯೇ ಜಿಲ್ಲೆಯಲ್ಲಿ ಮಂಗನ ಖಾಯಿಲೆ ಭೀತಿ ಹೆಚ್ಚಾಗಿದೆ. ನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ ಮಂಗ ಸತ್ತು ಬಿದ್ದಿದ್ದು, ಹೀಗಾಗಿ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಈಗಾಗಲೇ ಚಿಕ್ಕಮಗಳೂರು-ಶಿವಮೊಗ್ಗ ಗಡಿಯಲ್ಲಿ 8ಮಂದಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಈ ಹಿನ್ನೆಲೆ, ಚಿಕ್ಕಮಗಳೂರು ನಗರದಲ್ಲೂ ಮಂಗನ ಖಾಯಿಲೆ ಭೀತಿ ಹೆಚ್ಚಾಗಿದೆ. ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.










