ಚಿಕ್ಕಮಗಳೂರು : ಕಾರಿನ ಸಮೇತ ಕೊಚ್ಚಿ ಹೋಗುತ್ತಿದ್ದ ಇಬ್ಬರನ್ನು ರಕ್ಷಣೆ ಮಾಡಿದ ಸ್ಥಳೀಯರು…

101
firstsuddi

ಚಿಕ್ಕಮಗಳೂರು : ಜಿಲ್ಲೆಯ ಸಖರಾಯಪಟ್ಟಣದ ರಸ್ತೆಯೊಂದರ ಮೇಲೆ ಐದಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. ಆದರೂ ನಿರ್ಲಕ್ಷ್ಯ ತೋರಿದ ಕಾರು ಚಾಲಕ ಅದೇ ರಸ್ತೆ ಮೇಲೆ ಗಾಡಿ ಚಲಾಯಿಸಿದ್ದಾರೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದವರನ್ನು ನೋಡಿದ ಸ್ಥಳೀಯರು ಅವರನ್ನು ರಕ್ಷಣೆ ಮಾಡಿದ್ದಾರೆ. ಹಗ್ಗ ಕಟ್ಟಿ ಜೆಸಿಬಿ ಮೂಲಕ ಕಾರಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.