ಚಿಕ್ಕಮಗಳೂರು : ಕೇಂದ್ರ ಮತ್ತು ರಾಜ್ಯದಲ್ಲಿ ಮತ್ತೆ ಕಾಂಗ್ರೇಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಯುವ ಕಾಂಗ್ರೇಸ್ ಕಾರ್ಯಕರ್ತರು ಸಂಕಲ್ಪ ಮಾಡಬೇಕು : ವಿದ್ಯಾಬಾಲಕೃಷ್ಣ.

153
firstsuddi

ಚಿಕ್ಕಮಗಳೂರು : ಕೇಂದ್ರ ಮತ್ತು ರಾಜ್ಯದಲ್ಲಿ ಮತ್ತೆ ಕಾಂಗ್ರೇಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಯುವ ಕಾಂಗ್ರೇಸ್ ಕಾರ್ಯಕರ್ತರು ಸಂಕಲ್ಪ ಮಾಡಬೇಕು ಎಂದು ಯುವ ಕಾಂಗ್ರೇಸ್ ರಾಷ್ಟ್ರೀಯ ಕಾರ್ಯದರ್ಶಿ ವಿದ್ಯಾಬಾಲಕೃಷ್ಣ ಕರೆ ನೀಡಿದರು.
ನಗರದ ಕಾಂಗ್ರೇಸ್ ಕಛೇರಿಯಲ್ಲಿ ಇಂದು ನಡೆದ ಯುವ ಕಾಂಗ್ರೇಸ್ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಮತ್ತೆ ಜಾತ್ಯಾತೀತ ವ್ಯವಸ್ಥೆಯನ್ನು ಸ್ಥಾಪಿಸಬೇಕಾಗಿದ್ದು, ಅದಕ್ಕಾಗಿ ಕಾಂಗ್ರೇಸ್ ಅಧಿಕಾರಕ್ಕೆ ಬರುವುದು ಅಗತ್ಯವಾಗಿದೆ, ಯುವ ಕಾಂಗ್ರೇಸ್ ಕಾರ್ಯಕರ್ತರು ಪಕ್ಷದ ಶಕ್ತಿ, ಅವರು ಪಣ ತೊಟ್ಟರೆ ಮಾತ್ರ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ ಎಂದರು.
ಯುವ ಕಾಂಗ್ರೇಸ್ ಕಾರ್ಯಕರ್ತರು ಇಂದಿನ ಸನ್ನಿವೇಶದಲ್ಲಿ ತಮ್ಮ ಜವಾಬ್ದಾರಿಯನ್ನು ಅರಿಯಬೇಕು, ಬೂತ್ ಮಟ್ಟದಿಂದಲೇ ಪಕ್ಷವನ್ನು ಸಧೃಡಗೊಳಿಸಬೇಕು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಮಿತಿಯನ್ನು ರಚಿಸಬೇಕು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷವನ್ನು ಸಂಘಟಿತರಾಗಿ ಗೆಲ್ಲಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತ ಚುಕ್ಕಾಣಿಯನ್ನು ಹಿಡಿಯಲು ನಾಂದಿ ಹಾಡಬೇಕು ಎಂದು ಹೇಳಿದರು.
ಯುವ ಕಾಂಗ್ರೇಸ್ ರಾಜ್ಯ ಉಪಾಧ್ಯಕ್ಷ ಕೆಂಪರಾಜು ಮಾತನಾಡಿ ಯುವ ಕಾಂಗ್ರೇಸ್ ಕಾರ್ಯಕರ್ತರು ಸಂಘಟನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು, ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಾತನಾಡಿ ಯುವ ಕಾಂಗ್ರೇಸ್ ಕಾರ್ಯಕರ್ತರು ಸಂಘಟಿತವಾಗಿ ದುಡಿದರೆ ಮಾತ್ರ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಕಾರ್ಯಕರ್ತರಲ್ಲಿ ನಾಯಕತ್ವ ಗುಣ ಮತ್ತು ಸಂಘಟನಾ ಶಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಪಕ್ಷದ ಜಿಲ್ಲಾ ಉಸ್ತುವಾರಿ ಮಹಾಂತೇಶ್, ಜಿಲ್ಲಾ ವಕ್ತಾರ ಎಂ.ಸಿ.ಶಿವಾನಂದ ಸ್ವಾಮಿ, ಮಾಜಿ ಜಿಲ್ಲಾಧ್ಯಕ್ಷ ಡಾ|| ಡಿ.ಎಲ್.ವಿಜಯ್ ಕುಮಾರ್, ಯುವ ಕಾಂಗ್ರೇಸ್ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಾಹಿಲ್ ಷರೀಫ್, ವಿದ್ಯಾರ್ಥಿ ಕಾಂಗ್ರೇಸ್ ಅಧ್ಯಕ್ಷ ಆದಿಲ್, ಜೆ.ವಿನಾಯಕ, ಪುಷ್ಪಲತಾ ಉಪಸ್ಥಿತರಿದ್ದರು.