ಚಿಕ್ಕಮಗಳೂರು : ಕೊಳೆತ ಸ್ಥಿತಿಯಲ್ಲಿ ಚಿರತೆಯ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 4 ವರ್ಷ ಪ್ರಾಯದ ಹೆಣ್ಣು ಚಿರತೆಯ ಮೃತದೇಹ ಗಾಂಧಿನಗರ ಗ್ರಾಮದ ಚಾನೆಲ್ ಬಳಿ ಬಿದ್ದಿದ್ದು, ಮೂರು ದಿನದ ಹಿಂದೆ ಚಿರತೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










