ಚಿಕ್ಕಮಗಳೂರು : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ-ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು…

245
firstsuddi

ಚಿಕ್ಕಮಗಳೂರು : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಕಿರಣ್(26) ಹಾಗೂ ನಾಗರಾಜ ನಾಯ್ಕ್(30) ಮೃತ ಬೈಕ್ ಸವಾರರು ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಲಿಂಗದಹಳ್ಳಿ ಠಾಣಾ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದು, ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.