ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಟ್ರ್ಯಾಕ್ಟರ್ – ಸ್ಥಳದಲ್ಲೇ ಇಬ್ಬರ ಸಾವು…

993

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ತಿರುವಿನಲ್ಲಿದ್ದ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಣತಿ ಸಮೀಪದ ಬೆಟ್ಟದ ಮಳಲಿಯಲ್ಲಿ ನಡೆದಿದೆ. ಟ್ರ್ಯಾಕ್ಟರ್ ಚಾಲಕ ಮಂಜುನಾಥ್(38) ಹಾಗೂ ಗೋವಿಂದ ಶೆಟ್ಟಿ(62) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಟ್ರ್ಯಾಕ್ಟರ್ ಆಲ್ದೂರಿನಿಂದ ಕಣತಿ ಮಾರ್ಗವಾಗಿ ಬೆಟ್ಟದ ಮಳಲಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಲ್ದೂರು ಠಾಣಾಧಿಕಾರಿ ಸುನಿತಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.