ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಕನ್ನಡ ಸಾಹಿತ್ಯ ಪರಿಷತ್ ಉಳಿಸಿ ವೇದಿಕೆಯಿಂದ ತೀವ್ರ ವಿರೋಧ…

233
firstsuddi

ಚಿಕ್ಕಮಗಳೂರು : 2020ನೇ ಜನವರಿ 10 ಮತ್ತು 11ರಂದು ಶೃಂಗೇರಿಯಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳ್ಳಿ ವಿಠ್ಠಲ್ ಹೆಗ್ಡೆ ಅವರು ಆಯ್ಕೆಯಾಗಿದ್ದು, ಅವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಉಳಿಸಿ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗುವವರು ರಾಜಕೀಯಕ್ಕೆ ಅಂಟಿಕೊಳ್ಳದೆ ರಾಜಕೀಯೇತರ ವ್ಯಕ್ತಿಯಾಗಿರಬೇಕು. ಅಲ್ಲದೇ ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಹಾಗೂ ವಿವಾದಗಳಿಂದ ದೂರವಿದ್ದು, ಸಾಹಿತ್ಯ ಕೃಷಿ ಮಾಡಿದ ಸರ್ವಮಾನ್ಯ ವ್ಯಕ್ತಿಗಳಾಗಿರಬೇಕು. ಆದರೆ ವಿಠ್ಠಲ್ ಹೆಗ್ಡೆ ಅವರು ವಿವಾದಿತ ವ್ಯಕ್ತಿಯಾಗಿದ್ದು, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ. ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನು ಆಯ್ಕೆಮಾಡಲು ಇರಬೇಕಾದ ಎಲ್ಲಾ ಅಂಶಗಳನ್ನು ಗಾಳಿಗೆ ತೂರಿ ವಿಠ್ಠಲ್ ಹೆಗ್ಡೆ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ದಿನದಂದು ತಾಲ್ಲೂಕು ಸಾಹಿತ್ಯ ಪರಿಷತ್ ಸನ್ಮಾನ ಮಾಡುವುದಕ್ಕಾಗಿ ಕಲ್ಕುಳ್ಳಿ ಹೆಗ್ಡೆ ಅವರ ಹೆಸರನ್ನು ಸೂಚಿಸಿಸಲಾಗಿತ್ತು. ಆದರೆ ಕಲ್ಕುಳ್ಳಿ ಹೆಗ್ಡೆ ಅವರ ವಿರುದ್ಧ ಪ್ರಕರಣಗಳು ದಾಖಲಾಗಿರುವುದರಿಂದ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅವರ ಹೆಸರನ್ನು ಕೈಬಿಡಲಾಗಿತ್ತು. ಆದರೆ ಈಗಾ ಮತ್ತೊಮ್ಮೆ ಅವರನ್ನು ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು ವಿಪರ್ಯಾಸ ಎಂದು ಹೇಳಿದೆ. ಅಲ್ಲದೇ ಪ್ರಮುಖ ನಕ್ಸಲೈಟ್ಗಳೆಂದು ಪೊಲೀಸ್ ಇಲಾಖೆ ಘೋಷಿಸಿರುವ ವ್ಯಕ್ತಿಗಳೊಂದಿಗೆ ಇವರು ಸಂಬಂಧ ಹೊಂದಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ ಉಳಿಸಿ ವೇದಿಕೆ ಆರೋಪಿಸಿದೆ.