ಚಿಕ್ಕಮಗಳೂರು : ಜಿಲ್ಲಾ ಮಟ್ಟದ ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ತಾಲ್ಲೂಕಿನ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ…

663
First Suddi

ಚಿಕ್ಕಮಗಳೂರು : ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಅಂಗಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಬಿ.ವೈ.ಪ್ರಜ್ವಲ್, ತರೀಕೆರೆ ಆರಾಧನಾ ಅಕಾಡೆಮಿಯ ಕೆ.ಪಿ.ಮನೋಜ್, ನಗರದ ಬಾಲಿಕಾ ಪ್ರೌಢಶಾಲೆಯ ಆಯಿಷಾ ಹರ್ಮೆನ್, ಕೊಪ್ಪ ಸರ್ಕಾರಿ ಶಾಲೆಯ ಕೆ.ಪಿ.ಪ್ರದ್ಯುಮ್ನ ಹಾಗೂ ಮೂಡಿಗೆರೆ ಬೆಥನಿ ಶಾಲೆಯ ಅಶ್ವಿನ್ ಮೊಂತೆರೋ ವಿಜೇತರಾಗುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 540 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ತರೀಕೆರೆಯಲ್ಲಿ ನಡೆಯಲಿರುವ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಂ.ಮಂಜುನಾಥ ಸ್ವಾಮಿ ತಿಳಿಸಿದ್ದಾರೆ.