ಚಿಕ್ಕಮಗಳೂರು : ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕವಾಗಿ ನಗರದ ಕೆಂಪನಹಳ್ಳಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಮಾಡುವ ಮೂಲಕ ಆಚರಿಸಲಾಯಿತು. ಹೊಸ ಬಟ್ಟೆಯನ್ನು ಧರಿಸಿದ ನೂರಾರು ಪುರುಷರು ಮತ್ತು ಮಕ್ಕಳು ಪ್ರಾರ್ಥನೆಯನ್ನು ಸಲ್ಲಿಸಿದ್ದು. ಮೂರು ಸಾವಿರಕ್ಕೂ ಅಧಿಕ ಮುಸ್ಲಿಂ ಬಾಂಧವರಿಂದ ಏಕಕಾಲದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಒಬ್ಬರಿಗೊಬ್ಬರು ತಬ್ಬಿಕೊಂಡು ರಂಜಾನ್ ಹಬ್ಬದ ಶುಭಾಶಯ ಕೂರುವ ಮೂಲಕ ಸಡಗರದಿಂದ ಆಚರಿಸಿದರು.









