ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಕೊರೊನಾ ಮುಕ್ತವಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮತ್ತೆ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕಡೂರು ತಾಲ್ಲೂಕಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ 19 ಮಂದಿ ಸೋಂಕಿತರ ಪೈಕಿ 2 ಪ್ರಕರಣ ಫಾಲ್ಸ್ ಆಗಿದ್ದು, ಇನ್ನುಳಿದ 16 ಮಂದಿ ಈಗಾಗಲೇ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.









