ಚಿಕ್ಕಮಗಳೂರು : ಜಿಲ್ಲೆಯಲ್ಲೇ ಕೋವಿಡ್-19 ಪ್ರಯೋಗಾಲಯ ತೆರೆಯುವಂತೆ ಯುವ ಜನತಾದಳ ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

177
firstsuddi

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 916ಕ್ಕೆ ಏರಿಕೆಯಾಗಿದ್ದು, ಈ ಹಿನ್ನೆಲೆ ಜಿಲ್ಲೆಯಲ್ಲಿ ಕೂಡಲೇ ಕೋವಿಡ್-19 ಪ್ರಯೋಗಾಲಯವನ್ನು ತೆರೆಯಬೇಕು. ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಪಡುವವರ ರಕ್ತದ ಮಾದರಿ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಶಿವಮೊಗ್ಗ ಅಥವಾ ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಬೇಕಾಗಿದ್ದು, ಇದರಿಂದ ಪರೀಕ್ಷೆಗೆ ಒಳಪಟ್ಟವರ ಪರೀಕ್ಷಾ ವರದಿ ಬರಲು ಒಂದು ವಾರ ಬೇಕಾಗುತ್ತದೆ. ಇದರಿಂದ ಪರೀಕ್ಷೆಗೆ ಒಳಪಟ್ಟವರು ಸಾರ್ವಜನಿಕವಾಗಿ ಓಡಾಡುತ್ತಿರುವುದರಿಂದ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆದ್ದರಿಂದ ಕೂಡಲೇ ಈ ಕುರಿತು ಸರ್ಕಾರದ ಗಮನಕ್ಕೆ ತಂದು ಜಿಲ್ಲೆಯಲ್ಲಿ ಕೋವಿಡ್-19 ಪ್ರಯೋಗಾಲಯವನ್ನು ತೆರೆಯಬೇಕು ಎಂದು ಜಿಲ್ಲಾ ಯುವ ಜನತಾದಳ ಕಾರ್ಯಕರ್ತರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದರು.