ಚಿಕ್ಕಮಗಳೂರು : ಜೆಇಇ ಮತ್ತು ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿ ವಿದ್ಯಾರ್ಥಿ ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆ…

594
firstsuddi

ಚಿಕ್ಕಮಗಳೂರು : ಜೆಇಇ ಮತ್ತು ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿ ಯುವ ಕಾಂಗ್ರೇಸ್ ವಿಧಾನಸಭಾ ಕ್ಷೇತ್ರ ಸಮಿತಿ ಹಾಗೂ ವಿದ್ಯಾರ್ಥಿ ಕಾಂಗ್ರೇಸ್ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್ ವೃತ್ತದ ಬಳಿ ಇಂದು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಕೊರೋನಾ ವೈರಸ್ ಲಾಕ್‍ಡೌನ್‍ನಿಂದಾಗಿ ಈ ಬಾರಿ ವಿದ್ಯಾರ್ಥಿಗಳಿಗೆ ಅದರಲ್ಲೂ ಗ್ರಾಮೀಣ ಭಾಗದವರಿಗೆ ಓದಲು ಹಾಗೂ ಪರೀಕ್ಷಾ ಪೂರ್ವ ತಯಾರಿ ನಡೆಸಲು ಸಾಧ್ಯವಾಗಿಲ್ಲ ಹಾಗಾಗಿ ಈಗ ಪರೀಕ್ಷೆಯನ್ನು ಎದುರಿಸಲು ಅವರಿಗೆ ಕಷ್ಟವಾಗುತ್ತದೆ ಎಂದರು.
ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಾತನಾಡಿ ಕೊರೋನಾ ವೈರಸ್ ಲಾಕ್‍ಡೌನ್ ಜೊತೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಿಂದಾಗಿ ಭೂ ಕುಸಿತ ಮತ್ತು ಪ್ರವಾಹ ಉಂಟಾಗಿರುವುದರಿಂದ ಆ ಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಸ್ಯೆಯಾಗುತ್ತದೆ ಹಾಗಾಗಿ ಕೊರೋನಾ ಹಾವಳಿ ನಿಲ್ಲುವವರೆಗೂ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ನಡೆಸಬಾರದು ಎಂದು ಆಗ್ರಹಿಸಿದರು.
ಕಾಂಗ್ರೇಸ್ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ಅಧ್ಯಕ್ಷ ಎಂ.ಎಲ್.ಮೂರ್ತಿ, ಯುವ ಕಾಂಗ್ರೇಸ್ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಾಹಿಲ್ ಶರೀಫ್, ವಿದ್ಯಾರ್ಥಿ ಕಾಂಗ್ರೇಸ್ ಅಧ್ಯಕ್ಷ ಆದಿಲ್, ಮುಖಂಡರಾದ ಕಾರ್ತಿಕ್ ಚೆಟ್ಟಿಯಾರ್, ಜೆ.ವಿನಾಯಕ, ನಯಾಜ್, ಶಾದಾಬ್, ಧೃವಕುಮಾರ್, ಪುಷ್ಪಲತಾ, ಆಕಾಶ್, ಆದಿಲ್, ವಸಂತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.