ಚಿಕ್ಕಮಗಳೂರು : ಟ್ಯಾಂಕರ್ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು…

258
firstsuddi

ಚಿಕ್ಕಮಗಳೂರು : ಟ್ಯಾಂಕರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದು ಅತ್ತಿಗೆ ಮೈದುನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಳೆ ಲಕ್ಯಾ ಗ್ರಾಮದ ಬಳಿ ನಡೆದಿದೆ. ಮನೋಜ್(19) ಹಾಗೂ ಲತಾಮಣಿ(25)  ಮೃತ ದುರ್ದೈವಿಗಳು ಎನ್ನಲಾಗಿದ್ದು, ಮೃತರು ಕಡೂರಿನ ಎಸ್. ಬಿದರೆ ಗ್ರಾಮದವರು ಎಂದು ತಿಳಿದು ಬಂದಿದ್ದು, ಎಸ್.ಬಿದರೆಯಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಬೈಕ್‍ನಲ್ಲಿದ್ದ ಮಗು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

firstsuddi