ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಕಾರು – ಚಾಲಕ ಸ್ಥಳದಲ್ಲೇ ಸಾವು…

60
firstsuddi

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಬಳಿ ನಡೆದಿದೆ.

ರಂಜನ್ (38) ಮೃತ ಚಾಲಕ. ತಡೆಗೋಡೆ ಇಲ್ಲದೆ ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದ ಮಾರುತಿ-800 ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಜನ್ನಾಪುರದಿಂದ ಕಳಸ ಕಡೆಗೆ ಹೋಗುವ ಸಂದರ್ಭ ಅವಘಡ ಸಂಭವಿಸಿದೆ.

ತಿರುವಿನಲ್ಲಿ ತಡೆಗೋಡೆ ನಿರ್ಮಿಸಲು ಹಲವು ಬಾರಿ ಮನವಿ ಮಾಡಿದ್ದು, ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.