ಚಿಕ್ಕಮಗಳೂರು ಪರಿಷತ್ ಚುನಾವಣೆ : ಗೆಲುವಿನ ನಗೆ ಬೀರಿದ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್.

207
firstsuddi

ಚಿಕ್ಕಮಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಎಂ ಕೆ ಪ್ರಾಣೇಶ್ ಗೆಲುವಿನ ನಗೆ ಬೀರಿದ್ದಾರೆ.

ಪ್ರಾಣೇಶ್ ಅವರು 6 ಮತಗಳ ಅಂತರದಿಂದ ಕಾಂಗ್ರೆಸ್ಸಿನ ಗಾಯತ್ರಿ ಶಾಂತೇಗೌಡ ಅವರನ್ನು ಸೋಲಿಸಿದ್ದಾರೆ. ಚುನಾವಣೆಗೆ ನೊಂದಣಿಯಾಗಿದ್ದ 2,417 ಮತದಾರರ ಪೈಕಿ 7 ಮಂದಿ ಗೈರಾಗಿದ್ದರು. ಚಲಾವಣೆಯಾದ 2,410 ಮತಗಳ ಪೈಕಿ 39 ಮತಗಳನ್ನು ಅಸಿಂಧುಗೊಳಿಸಲಾಗಿದೆ. ಹೀಗಾಗಿ ಗೆಲುವಿಗೆ 1,186 ಮತಗಳ ಅಗತ್ಯವಿತ್ತು. ಬಿಜೆಪಿಯ ಎಂ.ಕೆ.ಪ್ರಾಣೇಶ್ 1,188 ಮತಗಳನ್ನು ಪಡೆದರೆ ಕಾಂಗ್ರೆಸ್ಸಿನ ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಪಡೆದಿದ್ದಾರೆ.

ಇನ್ನೂ ಕಾಫಿ ನಾಡಿನಲ್ಲಿ ಗೆಲುವಿನ ಬಳಿಕ ಬಿಜೆಪಿ ಸಂಭ್ರಮಾಚರಣೆ ನಡೆಸಿದರೆ, ಇತ್ತ ಎಣಿಕೆ ಕೇಂದ್ರದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸದಂತೆ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಲು ಮುಂದಾಗಿದೆ.