ಚಿಕ್ಕಮಗಳೂರು : ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…

148
firstsuddi

ಚಿಕ್ಕಮಗಳೂರು : ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಾತ, ಮೊಮ್ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಬಳಿ ನಡೆದಿದೆ. ಬೀರೂರಿನ ಬಳಿಗನೂರು ಗ್ರಾಮದ ನಿವಾಸಿ ಮಲ್ಲಪ್ಪ(57) ಹಾಗೂ ಉತ್ಸವ್(12) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರು ಬೈಕಿನಲ್ಲಿ ಕಡೂರಿನಿಂದ ಬೀರೂರಿಗೆ ತೆರಳುತ್ತಿದ್ದ ವೇಳೆ ಬೀರೂರಿನಿಂದ ಕಡೂರು ಕಡೆಗೆ ವೇಗವಾಗಿ ಬರುತ್ತಿದ್ದ ಟಿಪ್ಪರ್ ಬೈಕ್‍ಗೆ ಡಿಕ್ಕಿಯಾದ ಪರಿಣಾಮ ತಾತ ಹಾಗೂ ಮೊಮ್ಮಗ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್‍ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಬೀರೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.