ಚಿಕ್ಕಮಗಳೂರು : ಭಾರತ ಸೇವಾದಳದ ಜಿಲ್ಲಾ ಕಛೇರಿಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ…

599
firstsuddi

ಚಿಕ್ಕಮಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ನಗರದ ಭಾರತ ಸೇವಾದಳದ ಜಿಲ್ಲಾ ಕಛೇರಿಯಲ್ಲಿ ಇಂದು ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಸೇರಿದಂತೆ ಹಲವು ಗಣ್ಯರು ರಾಷ್ಟ್ರಪಿತ ಮತ್ತು ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಸೇವಾದಳದ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು, ರಾಷ್ಟ್ರಪಿತನಿಗೆ ಪ್ರಿಯವಾದ ರಘುಪತಿ ರಾಘವ ರಾಜಾರಾಂ ಗೀತೆಯನ್ನು ಸಾಮೂಹಿಕವಾಗಿ ಹಾಡಲಾಯಿತು.
ಇದೇ ವೇಳೆ ಭಾರತ ಸೇವಾದಳದ ಮಕ್ಕಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಕರ್ನಾಟಕ ದರ್ಶನ ಪ್ರವಾಸ ಸೌಲಭ್ಯವನ್ನು ಕಲ್ಪಿಸುವಂತೆ ಸಚಿವ ಸಿ.ಟಿ.ರವಿ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.
ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಬಿ.ಹೆಚ್.ನರೇಂದ್ರ ಪೈ , ಕಾರ್ಯದರ್ಶಿ ಹಂಪಯ್ಯ, ಖಜಾಂಚಿ ಜಗಧೀಶಾಚಾರ್, ಜಿಲ್ಲಾ ಸಂಘಟಕ ಚಂದ್ರಕಾಂತ್, ತಾಲ್ಲೂಕು ಅಧ್ಯಕ್ಷ ಬಿ.ಆರ್.ಜಗದೀಶ್, ತಾಲ್ಲೂಕು ಸಂಘಟಕ ಎಸ್.ಈ.ಲೋಕೇಶ್ವರಾಚಾರ್ ಹಾಜರಿದ್ದರು.