ಚಿಕ್ಕಮಗಳೂರು : ಭಾರತ ಸೇವಾದಳದ ಸಂಸ್ಥಾಪಕ ನಾ.ಸು.ಹರ್ಡಿಕರ್ ಅವರ ಜನ್ಮ ದಿನ ಸಂಭ್ರಮದಿಂದ ಆಚರಿಸಲಾಯಿತು.

354

ಚಿಕ್ಕಮಗಳೂರು- ಭಾರತ ಸೇವಾದಳದ ಸಂಸ್ಥಾಪಕ ನಾ.ಸು.ಹರ್ಡಿಕರ್ ಅವರ ಜನ್ಮ ದಿನವನ್ನು ಮಂಗಳವಾರ ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಭಾರತ ಸೇವಾದಳದ ಜಿಲ್ಲಾ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಹರ್ಡಿಕರ್ ಅವರ ಭಾವಚಿತ್ರಕ್ಕೆ ಗಣ್ಯರು ಸಾಮೂಹಿಕವಾಗಿ ಪುಷ್ಪ ನಮನ ಸಲ್ಲಿಸಿದರು.
ಆಜಾದ್ ಪಾರ್ಕ್ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸೇವಾದಳದ ಜ್ಞಾನಜ್ಯೋತಿ ಘಟಕ ಆಯೋಜಿಸಿದ್ದ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಬಿ.ಹೆಚ್.ನರೇಂದ್ರ ಪೈ ಉಧ್ಟಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾ.ಸು.ಹರ್ಡಿಕರ್ ಅವರು ಸ್ವಚ್ಚತೆ, ಸೇವೆ ಮತ್ತು ಶಿಸ್ತನ್ನು ಪ್ರತಿಪಾದಿಸಿದವರು, ಭಾರತ ಸೇವಾದಳ ಇಂದಿಗೂ ಅಭಾದಿತವಾಗಿ ಮುಂದುವರೆದಿರುವುದಕ್ಕೆ ಹರ್ಡಿಕರ್ ಅವರ ಪ್ರಬಲ ಇಚ್ಚಾಶಕ್ತಿ ಕಾರಣ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್ ಮಾತನಾಡಿ ಹರ್ಡಿಕರ್ ಅವರ ತತ್ವ ಮತ್ತು ಸಿದ್ದಾಂತಗಳನ್ನು ನಾವು ಪೂರ್ತಿಯಾಗಿ ಅಲ್ಲದಿದ್ದರೂ ಸ್ವಲ್ಪ ಮಟ್ಟಿಗಾದರೂ ಮೈಗೂಡಿಸಿ ಕೊಂಡಲ್ಲಿ ದೇಶ ಅಭಿವೃದ್ದಿಯಾಗುತ್ತದೆ ಎಂದು ಹೇಳಿದರು.
ಭಾರತ ಸೇವಾದಳದ ತಾಲ್ಲೂಕು ಸಂಘಟಕ ಎಸ್.ಈ.ಲೋಕೇಶ್ವರಾಚಾರ್ ಮಾತನಾಡಿ ಹರ್ಡಿಕರ್ ಅವರ ರಾಷ್ಟ್ರಭಕ್ತಿ, ದೇಶಪ್ರೇಮ, ತತ್ವ ಮತ್ತು ಸಿದ್ದಾಂತಗಳನ್ನು ಯುವಜನತೆ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಜನ್ಮದಿನದ ಪ್ರಯುಕ್ತ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು, ಶಾಲೆಯ ಮುಖ್ಯ ಶಿಕ್ಷಕಿ ಬಿ.ಆರ್.ಗೀತಾ ಅಧ್ಯಕ್ಷತೆ ವಹಿಸಿದ್ದರು.
ಭಾರತ ಸೇವಾದಳದ ಜಿಲ್ಲಾ ಸಂಘಟಕ ಚಂದ್ರಕಾಂತ್, ಸದಸ್ಯ ತಿಮ್ಮೇಗೌಡ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹೇಶ್ವರಪ್ಪ, ತಾಲ್ಲೂಕು ಅಧ್ಯಕ್ಷ ಕಾಳಯ್ಯ ಉಪಸ್ಥಿತರಿದ್ದರು.