ಚಿಕ್ಕಮಗಳೂರು : ಮರಗಳ್ಳತನದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ ಎಂದು ಶಂಕಿಸಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಕೆಸುವಿನಮನೆ ಗ್ರಾಮದಲ್ಲಿ ನಡೆದಿದೆ. ಆದರ್ಶ್ ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದ್ದು, ಆದರ್ಶ್ ಅವರು ಗ್ರಾಮದಲ್ಲಿ ಆಗುತ್ತಿದ್ದ ಮರಗಳ್ಳತನದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದರು ಎಂದು ಶಂಕಿಸಿ ಇಬ್ಬರು ಮರಗಳ್ಳರು ಯುವಕನಿಗೆ ಮನಬಂದಂತೆ ಥಳಿಸಿದ್ದು, ಈ ಕೃತ್ಯ ಎಸಗಿದವರಿಗೆ ರಾಜಕೀಯ ನಾಯಕರ ಬೆಂಬಲ ಇದೆ ಎನ್ನಲಾಗಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕ ಸದ್ಯ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಮರಗಳ್ಳತನ ಬಗ್ಗೆ ಮಾಹಿತಿ ನೀಡಿರುವ ಶಂಕೆ-ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು…










