ಚಿಕ್ಕಮಗಳೂರು: ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ…

93
firstsuddi

ಚಿಕ್ಕಮಗಳೂರು: ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತು ರೈತ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ ನಡೆದಿದೆ.

ದೇವೀರಮ್ಮ (64) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಇವರು ಕಡೂರಿನ ಗ್ರಾಮೀಣ ಕೂಟ ಫೈನಾನ್ಸ್ ಕಂಪನಿಯಲ್ಲಿ 78 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಅರ್ಥಿಕ ಸಂಕಷ್ಟದಿಂದ ಒಂದು ತಿಂಗಳಿನಿಂದ ಸಾಲದ ಕಂತನ್ನ ಮರುಪಾವತಿ ಮಾಡಿರಲಿಲ್ಲ.

ಒಂದು ತಿಂಗಳಿನಿಂದ ಪ್ರತಿ ವಾರ ಫೈನಾನ್ಸ್​ಗೆ ಸಾಲ ಮರುಪಾವತಿ ಮಾಡದ ಹಿನ್ನೆಲೆ ದೇವೀರಮ್ಮ ಅವರ ಮನೆ ಬಳಿ ಬಂದು ಕಿರುಕುಳ ನೀಡಿದ ಆರೋಪ ಫೈನಾನ್ಸ್ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ. ಉಳಿದ ಬಾಕಿ ಮೊತ್ತ ಕಟ್ಟುವಂತೆ ಒತ್ತಡ ಹೇರಿದ್ದಾರೆ.

ಸಿಬ್ಬಂದಿ ಕಿರುಕುಳಕ್ಕೆ ಮನನೊಂದ ದೇವೀರಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಗ್ರಾಮೀಣ ಕೂಟ ಫೈನಾನ್ಸ್ ಸಿಬ್ಬಂದಿ ಶಂಕರ್ ನಾಯಕ್, ಉಷಾ, ರುಬೀನಾ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.