ಚಿಕ್ಕಮಗಳೂರು ಯುವ ಮೋರ್ಚಾ ಅಧ್ಯಕ್ಷನಿಗೆ ಕೊಕ್ ನೀಡಿದ ಬಿಜೆಪಿ.

70
firstsuddi

ಚಿಕ್ಕಮಗಳೂರು : ಸಂಸದ ತೇಜಸ್ವಿ ಸೂರ್ಯ ಜೊತೆಗಿನ ಆಡಿಯೋ ವೈರಲ್ ಪ್ರಕರಣ ಸಂಬಂಧ ಗಂಭಿರವಾಗಿ ಪರಿಗಣಿಸಿದ ಬಿಜೆಪಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಸ್ಥಾನದಲ್ಲಿದ್ದ ಸಂದೀಪ್ ಹರವಿನಗಂಡಿ ಅವರಿಗೆ ಕೊಕ್ ನೀಡಿದೆ.

ಪ್ರವೀಣ್ ನೆಟ್ಟಾರು ಹತ್ಯೆ ನಂತರ ಅಧ್ಯಕ್ಷ ಸ್ಥಾನಕ್ಕೆ ಸಂದೀಪ್ ಅವರು ರಾಜೀನಾಮೆ ನೀಡಿದ್ದರು. ಇವರ ರಾಜೀನಾಮೆ ಬಳಿಕ ಹಲವು ಯುವ ಮೋರ್ಚಾ ಸದಸ್ಯರು ರಾಜೀನಾಮೆ ನೀಡತೊಡಗಿದರು. ರಾಜೀನಾಮೆಯನ್ನು ಹಿಂಪಡೆಯುವಂತೆ ತೇಜಸ್ವಿ ಸೂರ್ಯ ಅವರು ದೂರವಾಣಿ ಕರೆ ಮೂಲಕ ಸಂದೀಪ್ ಅವರ ಜೊತೆ ಮಾತನಾಡಿದ್ದರು.

ಕಾಂಗ್ರೆಸ್ ಸರ್ಕಾರವಿದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ತೇಜಸ್ವಿ ಸೂರ್ಯ ಹೇಳಿದ್ದರು. ಈ ಹೇಳಿಕೆ ವೈರಲ್ ಆಗುತ್ತಿದ್ದಂತೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಸಂದೀಪ್ ಅವರಿಗೆ ಕೊಕ್ ನೀಡಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಸಂತೋಷ್ ಕೋಟ್ಯಾನ್ ಅವರನ್ನು ನೇಮಿಸಲಾಗಿದೆ.