ಚಿಕ್ಕಮಗಳೂರು: ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು…

75
firstsuddi

ಚಿಕ್ಕಮಗಳೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.

ಮೃತರನ್ನು 24 ವರ್ಷದ ವಿಶ್ವಾಸ್ ಹಾಗೂ 22 ವರ್ಷದ ದೀಪಿಕಾ ಎಂದು ಗುರುತಿಸಲಾಗಿದೆ. ತರೀಕೆರೆ ತಾಲೂಕಿನ ಬೇಲೇನಹಳ್ಳಿಯ ನಿವಾಸಿಯಾದ ವಿಶ್ವಾಸ್ ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ ಇಬ್ಬರು ಬೈಕ್​ನಲ್ಲಿ ಹೋಗುವಾಗ ಲಾರಿಗೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.