ಚಿಕ್ಕಮಗಳೂರು : ಶೀಘ್ರದಲ್ಲೇ ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ : ಸಚಿವ ಸಿ.ಟಿ. ರವಿ.

398
firstsuddi

ಚಿಕ್ಕಮಗಳೂರು : ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪೂರ್ವದಲ್ಲಿ ಮತ್ತು ಚುನಾವಣೆಯ ನಂತರ ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿಭಜನೆಯಾಗಲಿದೆ. ಈಗಾಗಲೇ ಕೆಲವು ಶಾಸಕರು ಬಿಜೆಪಿಗೆ ಬರುವ ಆಶಯ ಹೊರಹಾಕಿದ್ದಾರೆ. ಯಾವುದನ್ನೂ ಕದ್ದು ಮುಚ್ಚಿ ಮಾಡಲು ಸಾಧ್ಯವಿಲ್ಲ. ಎಷ್ಟು ಜನ ಬಿಜೆಪಿಗೆ ಬರುತ್ತಾರೆ ಎಂದು ಮುಂದಿನ ದಿನಗಳಲ್ಲಿ ತಿಳಿಯುತ್ತದೆ. ಎಲ್ಲಾ ಶಾಸಕರು ವೈಚಾರಿಕ ನೆಲೆಯಲ್ಲಿ ಬಿಜೆಪಿಗೆ ಬರುತ್ತಿದ್ದಾರೆಯೇ ಹೊರತು ಯಾವುದೇ ವ್ಯವಹಾರಿಕ ದೃಷ್ಟಿಯಿಂದಲ್ಲ ಎಂದರು.