ಚಿಕ್ಕಮಗಳೂರು : ಸಂತ ಜೋಸೇಫ್ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್ ಘಟಕ ವತಿಯಿಂದ ಆರೋಗ್ಯ ತಪಾಸಣೆ…

263
firstsuddi

ಚಿಕ್ಕಮಗಳೂರು : ನಗರದ ಸಂತ ಜೋಸೇಫ್ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್ ಘಟಕ ರಾಷ್ಟ್ರೀಯ ಸೇವಾ ಯೋಜನೆಯಡಿ ತಾಲ್ಲೂಕಿನ ಮತ್ತಾವರದಲ್ಲಿ ಬುಧವಾರ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿತು.
ಹೋಲಿಕ್ರಾಸ್ ಆಸ್ಪತ್ರೆಯ ವೈದ್ಯರ ತಂಡ ಗ್ರಾಮದಲ್ಲಿ ನಡೆಯುತ್ತಿರುವ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು 150 ಕ್ಕೂ ಹೆಚ್ಚು ಗ್ರಾಮಸ್ಥರ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ನಡೆಸಿತು.
ಇದೇ ವೇಳೆ ನಡೆದ ರಕ್ತದಾನ ಶಿಬಿರದಲ್ಲಿ 25 ಗ್ರಾಮಸ್ಥರು ರಕ್ತದಾನ ಮಾಡಿದರು, ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಕಾರ್ಡೋಜಾ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸೇವಾಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ರಕ್ತದಾನವೆಂದರೆ ಜೀವದಾನ, ರಕ್ತದಾನ ಮಾಡುವ ಮೂಲಕ ಜೀವ ಉಳಿಸಬಹುದು, ಸಮಾಜ ಸೇವೆಯಿಂದ ಬದುಕು ಸಾರ್ಥಕತೆ ಪಡೆಯುತ್ತದೆ ಎಂದು ಹೇಳಿದರು.
ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಎಂ.ಎ.ವಿನಯ್‍ಕುಮಾರ್, ಉಪನ್ಯಾಸಕರಾದ ಸುಶ್ಮಿತಾ ಡಿಸೋಜಾó, ಮಹೇಶ್, ಸೋಯಲ್ ಅಹಮದ್, ಸುರೇಶ್ ಹಾಜರಿದ್ದರು.