ಚಿಕ್ಕಮಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು, ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂ ಗೊಂಡಿದ್ದು, ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










