ಚಿಕ್ಕಮಗಳೂರು : ಸಾಮಾಜಿಕ ಅಂತರ ಗಾಳಿಗೆ ತೂರಿದ ಜನರ ಅತಿರೇಖದ ವರ್ತನೆಗೆ ಎಪಿಎಂಸಿ ಮಾರುಕಟ್ಟೆಯಲ್ಲಿ ಲಾಠಿ ಚಾರ್ಜ್…

1041
firstsuddi

ಚಿಕ್ಕಮಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್‍ಡೌನ್ ಆದೇಶ ಜಾರಿಯಲ್ಲಿದ್ದರೂ, ಆದೇಶವನ್ನು ಉಲ್ಲಂಘಿಸಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇಂದು ಬೆಳಿಗ್ಗೆ ರೈತರು, ತರಕಾರಿ ವ್ಯಾಪಾರಸ್ಥರು ಹಾಗೂ ಮಧ್ಯವರ್ತಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಕೊರೊನಾ ಸೋಂಕು ಭೀತಿಯನ್ನು ಮರೆತು ನೂಕುನುಗ್ಗಲಿನಲ್ಲಿ ಖರೀದಿ ಮತ್ತು ಮಾರಾಟದಲ್ಲಿ ತೊಡಗಿಕೊಂಡು ಸಾಮಾಜಿಕ ಅಂತರ ಗಾಳಿಗೆ ತೂರಿದ ಜನರ ಅತಿರೇಖದ ವರ್ತನೆಗೆ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಜನರನ್ನು ಚದುರಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರು ತರಕಾರಿ ಮಾರಾಟ ಮಾಡಲು ಮಾರುಕಟ್ಟೆಗೆ ಬಂದ ಕಾರಣ ಜನಜಾತ್ರೆಯಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಜನರು ಮುಗಿಬಿದ್ದು ಖರೀದಿಯಲ್ಲಿ ತೊಡಗಿದ್ದರಿಂದ ಪೊಲೀಸರು ಬೆತ್ತದ ರುಚಿ ತೋರಿಸಿ ಗುಂಪು ಚದುರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.