ಚಿಕ್ಕಮಗಳೂರು : ಸಾವಿನಲ್ಲೂ ಒಂದಾದ ವೃದ್ಧ ದಂಪತಿ…

216
firstsuddi

ಚಿಕ್ಕಮಗಳೂರು : ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಯೂ ಮೃತಪಟ್ಟಿರುವ ಮನಕಲುಕುವ ಘಟನೆ ತಾಲ್ಲೂಕಿನ ಕಳಸಾಪುರ ಸಮೀಪದ ಗಾಳಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ದೊಡ್ಡ ರಾಜಣ್ಣ(84) ಹಾಗೂ ರುದ್ರಮ್ಮ(74) ಎಂದು ಗುರುತಿಸಲಾಗಿದೆ. ಮೃತ ದೊಡ್ಡ ರಾಜಣ್ಣ ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಅವರ ಆರೋಗ್ಯದಲ್ಲಿ ತೀವ್ರ ಬದಲಾವಣೆ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಸ್ಥಳಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲಿ ರಾಜಣ್ಣ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಬಳಿಕ ಕಳೆದ ಒಂದು ವಾರದಿಂದ ಪಾರ್ಶ್ವ ವಾಯುವಿನಿಂದ ಬಳಲುತ್ತಿದ್ದ ರುದ್ರಮ್ಮ ಅವರು ಪತಿಯ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಮೃತಪಟ್ಟಿದ್ದು, ಕುಟುಂಬಸ್ಥರಲ್ಲಿ ನೋವು ಉಂಟಾಗಿದ್ದು, ದಂಪತಿಯ ಅಂತ್ಯಕ್ರಿಯೆಯನ್ನು ಒಟ್ಟಿಗೆ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.